spot_imgspot_img
spot_img

“ಬಡವರಿಗೆ ಸಹಾಯ ಮಾಡುವುದಕ್ಕಿಂತ ದೊಡ್ಡ ಅಭಿವೃದ್ಧಿ ಇಲ್ಲ” – ಕೃಷ್ಣ ಬೈರೇಗೌಡ

ಕೆಲವರು ಅಭಿವೃದ್ಧಿ ಕಾಮಗಾರಿ ಕುಂಠಿತವಾಗಿದೆಯೆಂದು ಮಾತನಾಡುತ್ತಾರೆ. ಆದರೆ, ಬಡವರ ಸಮಸ್ಯೆ, ಜೀವನದ ಕಷ್ಟ ಅರ್ಥ ಮಾಡಿಕೊಳ್ಳದವರು ಮಾತ್ರವೇ ಇಂತಹ ಮಾತುಗಳನ್ನಾಡಲು ಸಾಧ್ಯ. ಅವಕಾಶ, ಅಭಿವೃದ್ಧಿಗಳಿಂದ ವಂಚಿತರಾದವರು ಹಾಗೂ ಬಡವರಿಗೆ ಸಹಾಯ ಮಾಡುವುದೇ ಅಭಿವೃದ್ಧಿ. ಇದಕ್ಕಿಂತ ದೊಡ್ಡ ಅಭಿವೃದ್ಧಿ ಯಾವುದೂ ಇಲ್ಲ” ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

KBG01

ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರ ಹಾಗೂ ಜನಸಾಮಾನ್ಯರ ಅಹವಾಲು ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಆಡಳಿತ ವ್ಯವಸ್ಥೆ ಕುಸಿತದಿಂದ ಹಾಗೂ ಅಧಿಕಾರಿಗಳು ಸರಿಯಾಗಿ ಜವಾಬ್ದಾರಿ ನಿರ್ವಹಿಸದಿರುವುದರಿಂದ ಜನರು ಸಮಸ್ಯೆಗಳನ್ನು ಎದರಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಈಗಾಗಲೇ ಜಿಲ್ಲೆಯಲ್ಲಿರುವ ಕೆಲವೊಂದು ವಿಶಿಷ್ಟ ಸಮಸ್ಯೆಗಳ ಬಗ್ಗೆ ಗಮನ ಹರಿಸಿದ್ದೇನೆ. ಸರಕಾರ ಮಟ್ಟದಲ್ಲಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಭರವಸೆ ನೀಡಿದರು.

KBG02

ಪಕ್ಷ ಸಂಘಟನೆ, ಕಾರ್ಯಕರ್ತರ ಹಿತವೂ ಮುಖ್ಯ. ಆದರೆ ಮತ ಹಾಕಿರುವವರ ನಿರೀಕ್ಷೆ ಈಡೇರಿಸುವುದು ಅತೀ ಮುಖ್ಯ. ಮುಖ್ಯಮಂತ್ರಿಯವರು ಹೇಳಿದಂತೆ ಜನಪರ ಆಡಳಿತ ನೀಡಬೇಕು. ಬಿಜೆಪಿಯವರ ದುರಾಡಳಿತದಿಂದ ಬೇಸತ್ತು ಮತ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತಹ ಕಾರ್ಯನಿರ್ವಹಿಸಲು ಪ್ರಯತ್ನ ಮಾಡುತ್ತೇನೆ ಎಂದರು.

ಕಾಂಗ್ರೆಸ್ ಸರಕಾರ ಆಡಳಿತ ಆರಂಭಿಸಿ 100 ದಿನಗಳಾಗಿದ್ದು, ಇಷ್ಟು ಕಡಿಮೆ ಅವಧಿಯಲ್ಲಿ ಯಾವುದೇ ರಾಜ್ಯ ಸರಕಾರ ಮಾಡಲು ಸಾಧ್ಯವಾಗದ ಕ್ರಾಂತಿಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. 5 ವರ್ಷಗಳು ಕಳೆದರೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ ಎಂದು ಬಿಜೆಪಿಯವರು ಟೀಕಿಸಿದ್ದರು. ಜನಸಾಮಾನ್ಯರಿಗೂ ಅನುಮಾನವಿತ್ತು. ಆದರೆ ಸರಕಾರ ಕ್ರಾಂತಿಕಾರಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದು ದೊಡ್ಡ ಸಾಧನೆ. ಬಡವರಿಗೆ ಸರಕಾರ ನೀಡುವ 52 ಸಾವಿರ ಕೋಟಿ ರೂ.ಗಳಿಂದ 2.50 ಲಕ್ಷ ಕೋಟಿ ರೂ. ಆರ್ಥಿಕ ಉತ್ಪನ್ನ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಇಬ್ರಾಹೀಂ ಕೋಡಿಜಾಲ್, ಲುಕ್ಮಾನ್ ಬಂಟ್ವಾಳ, ಶಾಲೆಟ್ ಪಿಂಟೋ, ವಿಶ್ವಾಸ್ ದಾಸ್, ಹೇಮನಾಥ್ ಶೆಟ್ಟಿ ಕಾವು, ಪ್ರಕಾಶ್ ಶೆಟ್ಟಿ ತುಂಬೆ, ಲಾರೆನ್ಸ್ ಡಿಸೋಜ, ಶುಭಾಷ್ ಕೊಲ್ನಾಡ್, ಬಿ.ಎಂ.ಅಬ್ಬಾಸ್ ಅಲಿ, ಶೇಖರ್ ಕುಕ್ಕೇಡಿ, ಸಂತೋಷ್ ಕುಮಾರ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್, ಮೋಹನ್ ಕೋಟ್ಯಾನ್, ಸುರೇಂದ್ರ ಕಾಂಬ್ಳಿ, ವಸಂತ್ ಬೆರ್ನಾಡ್, ಜೆ.ಅಬ್ದುಲ್ ಸಲೀಂ, ಬೇಬಿ ಕುಂದರ್, ಸರ್ವೋತ್ತಮ ಗೌಡ, ಸುಹಾನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.