ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018 ರಲ್ಲಿ ಆರಂಭಗೊಂಡ ಕೊಂಕಣಿ ಲೇಖಕ್ ಸಂಘ್ ಕರ್ನಾಟಕ 2022 ರಿಂದ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ನಿರ್ಧರಿಸಿದ್ದು, ಪ್ರಶಸ್ತಿಯು ರುಪಾಯಿ 25,000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಹೊಂದಿರುತ್ತದೆ.

2024 ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ| ಜೆರಾಲ್ಡ್ ಪಿಂಟೊ (ಜೆರಿ, ನಿಡ್ಡೋಡಿ) ಇವರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 17, 2024 ನೇ ಶನಿವಾರ ಸಂಜೆ 6.30 ಕ್ಕೆ, ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು, ಇಲ್ಲಿ ಜರಗಲಿರುವುದು ಎಂದು ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಜಾಹೀರು ಮಾಡಿದರು.

ಈ ವರೆಗೆ, ಜೆರಿ ನಿಡ್ಡೋಡಿ ಅವರ 6 ಕಾದಂಬರಿಗಳು, 75 ಕತೆಗಳು ಹಾಗೂ 900 ಕ್ಕೂ ಮೇಲ್ಪಟ್ಟು ಲೇಖನಗಳು ಕೊಂಕಣಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ಕುಡ್ಮಿ ಕೊಂಕ್ಣಿ ಲೋಕ್ವೇದ್’ ಎಂಬ ಸಂಶೋಧನಾ ಗೃಂಥ ಹಾಗೂ ‘ವಿಸಾವ್ಯಾ ಶೆಕ್ಡ್ಯಾಚೆ ಕೊಂಕ್ಣಿ ಮ್ಹಾನ್ ಮನಿಸ್’ ಎಂಬ ಕೃತಿಯನ್ನು ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಕಟಿಸಿದ್ದಾರೆ. ಅವರು ಬರೆದ ಇನ್ನಿತರ ಪುಸ್ತಕಗಳಲ್ಲಿ ತುಜೆಂ ಶಿಕಾಪ್, ತುಜಿ ವೃತ್ತಿ, ಗ್ಯಾಲಕ್ಸಿ, ವಿಶ್ವ್ ವಿಜ್ಞಾನ್ ಪ್ರಮುಖವಾಗಿವೆ.
ಅವರಿಗೆ ಕೊಂಕ್ಣಿ ಕುಟಮ್ ಬಾಹ್ರೇಯ್ನ್ , ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ದಾಯ್ಜಿ ದುಬಾಯ್, ದಿವೊ ಸಾಹಿತ್ಯ ಪ್ರಶಸ್ತಿ ಲಭಿಸಿವೆ. ‘ರಾಕ್ಣೊ’ ಸಂಪಾದಕೀಯ ಮಂಡಳಿಯ ಸದಸ್ಯರಾಗಿ, ‘ಆಮ್ಚೊ ಸಂದೇಶ್’ ಪತ್ರಿಕೆಯ ಸಂಪಾದಕರಾಗಿ, ‘ಮಿಲಾರ್ಚಿಂ ಲ್ಹಾರಾಂ’ ತ್ರೈಮಾಸಿಕದ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಕಥೊಲಿಕ್ ಸಭಾದ ಕೇಂದ್ರೀಯ ಅಧ್ಯಕ್ಷರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಉಡುಪಿಯಲ್ಲಿ ‘ಕೊಂಕ್ಣಿ ಭಾಸ್, ಸಾಹಿತ್ಯ್ ಕಲಾ ಅನಿ ಸಾಂಸ್ಕೃತಿಕ್ ಸಂಘಟನ್’ ಎಂಬ ಸಂಘಟನೆಯನ್ನು ಸ್ಥಾಪಿಸಿ ಅನೇಕ ಕೊಂಕಣಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅವರು ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದಾರೆ. ಪ್ರಸ್ತುತ ಎಂ.ಸಿ.ಸಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ಡೊಲ್ಫಿ ಎಫ್. ಲೋಬೊ, ಹೆನ್ರಿ ಮಸ್ಕರೇನ್ಹಸ್ ಮತ್ತು ಸಲಹಾ ಸಮಿತಿ ಸದಸ್ಯ ಜೆ. ಎಫ್. ಡಿಸೋಜಾ ಹಾಜರಿದ್ದರು.





Hearty Congratulations, a small confusion on Konkani award news getting published in Kamnada.
Congratulations to Dr. GERALD PINTO. I am proud of you, and feel proud to tell others that I am your class mate. May you be blessed with good health, may konkani lovers get more to read from your end.
CONGRATULATIONS,Dr.Gerald Pinto (Jerry Niddodi)well deserved personality for the Honor and Award,congratulations to Konkani Lekhak Sangh,Karnataka for encouraging and supporting the konkani literature and culture. Good luck and God bless you all.